ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 17 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಮಾಸಿಕ ಗೌರವಧನ ರೂ.10000/- ರಂತೆ ಹಾಗೂ 79 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ವೇತನ 5000/- ರೂ.ನಂತೆ ಗೌರವ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ : ಅಂಗನವಾಡಿ ಕಾರ್ಯಕರ್ತೆ : 17
ಅಂಗನವಾಡಿ ಸಹಾಯಕಿ : 79

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-01-2022 ಬೆಳಗ್ಗೆ 10.00 ಗಂಟೆಯಿಂದ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-02-2022 ಸಂಜೆ 5.30 ಗಂಟೆಯವರೆಗೆ

ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ/ 10 ನೇ ತರಗತಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಗತಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ.

Leave A Reply

Your email address will not be published.