Home latest ಗುತ್ತಿಗಾರು : ನೇಣು ಬಿಗಿದು 7ನೇ ತರಗತಿಯ ಬಾಲಕಿ ಆತ್ಮಹತ್ಯೆ

ಗುತ್ತಿಗಾರು : ನೇಣು ಬಿಗಿದು 7ನೇ ತರಗತಿಯ ಬಾಲಕಿ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

ಸುಳ್ಯ : ಗುತ್ತಿಗಾರಿನ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿ ನವೋದಯ ಶಾಲೆಗೆ ಏಳನೇ ತರಗತಿಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‌ಲೈನ್ ತರಗತಿ ನಡೆಯುತ್ತಿತ್ತು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಪುನರಾರಂಭಗೊಳ್ಳಲಿತ್ತೆನ್ನಲಾಗಿದೆ.

ಇಂದು ಮುಂಜಾನೆ ಹರೀಶ್ ಪೂಜಾರಿಕೋಡಿಯವರು ಮನೆಯಿಂದ ಹೊರಟು ಸುಳ್ಯದ ಕಡೆಗೆ ಬಂದ ಸ್ವಲ್ಪ ಹೊತ್ತಲ್ಲೇ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಳೆನ್ನಲಾಗಿದೆ.

ಮನೆಯಲ್ಲಿದ್ದವರಿಗೆ ವಿಷಯ ಗೊತ್ತಾಗಿ ತಕ್ಷಣ ಹೋಗಿ ಹಗ್ಗದಿಂದ ಕೆಳಗಿಳಿಸಿ, ಗುತ್ತಿಗಾರಿಗೆ ಆಸ್ಪತ್ರೆಗೆ ಕರೆತಂದರು . ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಯಿತು. ಇಲ್ಲಿ ಬಂದು ತಲುಪಿದಾಗ ಆಕೆ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಹೇಳಿರುವುದಾಗಿ ತಿಳಿದು ಬಂದಿದೆ.