ಮಲ್ಪೆ: ಬೈಕ್ ಅಪಘಾತದಲ್ಲಿ SDM ವಿದ್ಯಾರ್ಥಿ ಸಾವು

ನಿಯಂತ್ರಣ ತಪ್ಪಿದ ಬೈಕೊಂದು ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದು ವೈದ್ಯಕೀಯ ವಿದ್ಯಾರ್ಥಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ಮಲ್ಪೆಯಲ್ಲಿ ನಡೆದಿದೆ.

ಉದ್ಯಾವರ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಬೀದರ್ ಜಿಲ್ಲೆಯ ಋಷಿಕೇಶ್ (23) ಮೃತಪಟ್ಟ ದುರ್ದೈವಿ.

ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಅಂತಿಮ ಬಿಎಎಂಎಸ್ ವಿದ್ಯಾರ್ಥಿಯಾಗಿದ್ದ ಈತ, ಕುಪ್ಪಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಮೊನ್ನೆ ಮಧ್ಯರಾತ್ರಿ ಮಲ್ಪೆ ಬೀಚ್‌ಗೆ ತನ್ನ ಬೈಕಿನಲ್ಲಿ ಒಬ್ಬನೇ ಹೊರಟಿದ್ದನೆನ್ನಲಾಗಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಋಷಿಕೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.