ಬೆಳಂದೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಅಪಘಾತ

Share the Article

ಕಾಣಿಯೂರು: ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದ ಘಟನೆ ಬೆಳಂದೂರು ಸಮೀಪ ಅಂಕಜಾಲು ಎಂಬಲ್ಲಿ ಫೆ 7ರಂದು ನಡೆದಿದೆ.

ಚಾಲಕ ನಿಯಂತ್ರಣವನ್ನು ಕಳೆದುಕೊಂಡು ಕಾರು ರಸ್ತೆ ಬದಿಯಲ್ಲಿರುವ ಪೊದೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಸಮೀಪದಲ್ಲಿಯೇ ಇದ್ದ ವಿದ್ಯುತ್ ಕಂಬಗಳನ್ನು ತಪ್ಪಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳಿಕ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆತ್ತಲಾಯಿತು.

Leave A Reply