ವಿಟ್ಲ : ಒಂಟಿ ಮಹಿಳೆ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನಾಭರಣ ಲೂಟಿ ಮಾಡಿದ ದುಷ್ಕರ್ಮಿಗಳು !!!

Share the Article

ವಿಟ್ಲ : ಮನೆಗೆ ನುಗ್ಗಿ ಮಹಿಳೆಯ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.

ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದಾಗ ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಬಂದು ಕತ್ತಿಯಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಭೀಪಾತುಮ್ಮ‌ ಅವರ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ನಂತರ ಈ ಘಟನೆ ಬೆಳಕಿಗೆ ಬಂದಿದೆ‌.

Leave A Reply