ಇಂದು ಸರ್ವೆ ಶ್ರೀ ಸುಬ್ರಹ್ಮಣೇಶರ ದೇವಸ್ಥಾನದಲ್ಲಿ ದೃಢಕಲಶ,ಅಭಿನಂದನೆ,ಧಾರ್ಮಿಕ ಸಭೆ

Share the Article

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವ ಸ್ಥಾನದಲ್ಲಿ ಫೆ. 11ರಂದು ದೃಢಕಲಶ ನಡೆಯಲಿದೆ. ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6ರಿಂದ ರಂಗಪೂಜೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 7ರಿಂದ ಅಭಿನಂದನೆ ಮತ್ತು ಧಾರ್ಮಿಕ ಸಭೆ ನಡೆಯಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು. ಕ್ಷೇತ್ರದ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಅಜಲಾಡಿಬೀಡು ಸದಾಶಿವ ರೈ, ಚಾರ್ವಾಕ ಕಪಿಲೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಪ್ರಮುಖರಾದ ಆನಂದ ರೈ ಸೂರಂಬೈಲು, ವಿಶ್ವಂಭರ ಶೆಟ್ಟಿ ಸೊರಕೆ, ಕೇಶವಚಂದ್ರ ಭಟ್ ಪೆರಿಯಡ್ಕ ಭಾಗವಹಿಸಲಿದ್ದಾರೆ.

ರಾತ್ರಿ 10ರಿಂದ ಚಾಪರ್ಕ ಕಲಾವಿದರಿಂದ ದೇವದಾಸ್ ಕಾಪಿಕಾಡ್ ನಿರ್ದೇಶನದ ಪನಿಯರ ಆವಂದಿನ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Leave A Reply