ಹಿಜಾಬ್ ಸಂಘರ್ಷದ ಸಂದರ್ಭ ಮುಸ್ಲಿಂ ಮಹಿಳೆಯರ ಪರ ನಿಂತ ನರೇಂದ್ರ ಮೋದಿ

Share the Article

ಲಕ್ನೋ : ಉತ್ತರ ಪ್ರದೇಶದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಮೋದಿ ಅವರು ಹಿಜಾಬ್ ಕುರಿತಂತೆ ಹೇಳಿಕೆಯೊಂದನ್ನು ಹೇಳಿದ್ದಾರೆ. ಬಿಜೆಪಿಯವರಿಗೆ ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ ಗೌರವವಿದೆ ಎಂಬುದಾಗಿ ಹೇಳಿದ್ದಾರೆ.

ವಿಪಕ್ಷ ನಾಯಕರು ಜನರ ಹಾದಿಯನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಮುಸ್ಲಿಂ ಮಹಿಳೆಯರ ಮೇಲೆ ಗೌರವವಿದೆ. ಮುಸ್ಲಿಂ ಮಹಿಳೆಯರಿಗೆ ಬಿಜೆಪಿಯವರು ಬೆಂಬಲಿಸುತ್ತಿರುವುದು ವಿಪಕ್ಷಗಳಿಗೆ ಸಹಿಸಲು ಆಗುತ್ತಿಲ್ಲ‌ . ನಾವು ಮುಸ್ಲಿಂ ಹೆಣ್ಣುಮಕ್ಕಳ ಪರವಾಗಿದ್ದೇವೆ ಎಂದಿದ್ದಾರೆ.

ತ್ರಿವಳಿ ತಲಾಖ್ ಶಿಕ್ಷೆಯಿಂದ ಮುಸ್ಲಿಂ ಮಹಿಳೆಯರನ್ನು ಮುಕ್ತಗೊಳಿಸಿದ್ದೇವೆ. ಮುಸ್ಲಿಂ ಮಹಿಳೆಯರಿಗೆ ಬಿಜೆಪಿ ಮೇಲೆ ವಿಶ್ವಾಸವಿದೆ. ತಮ್ಮ ವೋಟ್ ಎಲ್ಲಿ ತಪ್ಪಿ ಹೋಗುತ್ತದೆ ಎಂದು ವಿಪಕ್ಷಗಳು ಈ ರೀತಿ ಮಾಡುತ್ತಿದ್ದಾರೆ ಇದರಿಂದ ಅವರಿಗೆ ನಿದ್ದೆ ಬರುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Leave A Reply