ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್ ನಿಧನ

Share the Article

ಕಡಬ: ಇಲ್ಲಿನ ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಅವರು ಫೆ.11ರಂದು ನಿಧನ ಹೊಂದಿದ್ದಾರೆ.

ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರು ಆಗಿ ಕಾರ್ಯನಿರ್ವಹಿಸಿದ್ದರು, ಜೇಸಿ, ಲಯನ್ಸ್ ಸೇರಿದಂತೆ ವಿವಿಧ ಸಂಘಸಂಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಇವರು ಕಳೆದ ಹಲವಾರು ವರ್ಷಗಳಿಂದ ಕಡಬ ವರ್ತಕ ಸಂಘದ ಅಧ್ಯಕ್ಷರಾಗಿದ್ದಾರೆ.

ಇವರು ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಮೃತರು ಪತ್ನಿ ಕಡಬ ಗ್ರಾ.ಪಂ.ಮಾಜಿ ಅಧ್ಯಕ್ಷೆ ನೀಲಾವತಿ ಶಿವರಾಮ್, ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.

Leave A Reply