ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳು ಪುನರಾರಂಭ !!|ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಬಿಸಿ ನಾಗೇಶ್
ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಅರಗ ಜ್ಙಾನೇಂದ್ರ, ಡಾ.ಅಶ್ವತ್ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಙಾನೇಂದ್ರ, ಶಾಂತಿಭಂಗವಾಗದಂತೆ ಕಾಲೇಜು ಆರಂಭ ಮಾಡಲಾಗುತ್ತಿದೆ. ಪೊಲೀಸ್ ಬಿಗಿಭದ್ರತೆಯಲ್ಲಿ ಕಾಲೇಜು ಪ್ರಾರಂಭ ಮಾಡಲು ಅನುಮತಿ ನೀಡಲಾಗಿದೆ. ಕಾಲೇಜು ಆಡಳಿತದ ಜೊತೆ ಸಂಪರ್ಕದಲ್ಲಿರುತ್ತೇವೆ. ಹೈಕೋರ್ಟ್ ಆದೇಶ ಸ್ಟ್ರಿಟ್ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ನಂತರ ಈ ಕುರಿತು ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಗತಿಗಳನ್ನು ಬುಧವಾರದಿಂದಲೇ ಪುನಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹೀಗಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳಲ್ಲೂ ಭೌತಿಕ ತರಗತಿಗಳು ಮತ್ತೆ ಆರಂಭವಾಗಲಿವೆ. ರಜೆ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು.