ತನ್ನ ಹುಟ್ಟುಹಬ್ಬದಂದು ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ದುರಂತ ಸಾವು!!

Share the Article

ತನ್ನ ಹುಟ್ಟುಹಬ್ಬದಂದು ಆಕಸ್ಮಿಕವಾಗಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ದುರಂತ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ನಡೆದಿದೆ.

ಭಾನುವಾರ ಈ ಘಟನೆ ನಡೆದಿದ್ದು, ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಳು. ಆಕೆಯ ಪೋಷಕರು ಅತಿಥಿಗಳನ್ನು ಭೇಟಿ ಮಾಡಲು ಮತ್ತು ಊಟ ಬಡಿಸಲು ಹೋದಾಗ, ತೇಜಸ್ವಿ ಅಡುಗೆ ಮನೆಗೆ ಹೋಗಿ ಕುರ್ಚಿ ಮೇಲೆ ಹತ್ತಿ ಆಟವಾಡುತ್ತಿದ್ದ ವೇಳೆ ಬಿಸಿ ಸಾಂಬಾರ್ ತುಂಬಿದ ಪಾತ್ರೆಯಲ್ಲಿ ಬಿದ್ದಿದ್ದಾಳೆ.

ತಕ್ಷಣ ತೇಜಸ್ವಿಯನ್ನು ಪೋಷಕರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ವೈದ್ಯರ ಶಿಫಾರಸಿನ ಮೇರೆಗೆ ಆಕೆಯನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ವಿಪರೀತ ಸುಟ್ಟ ಗಾಯಗೊಂಡಿದ್ದರಿಂದ ತೇಜಸ್ವಿ ಸಾವನ್ನಪ್ಪಿದ್ದಾಳೆ.

ಸದ್ಯ ಪೊಲೀಸರು ಈ ಘಟನೆ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave A Reply