ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!!

Share the Article

ಸಚಿವ ಈಶ್ವರಪ್ಪ ಕೆಂಪುಕೋಟೆ ಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹ ದಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ.

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದಾಗ ಪೊಲೀಸರು ಮೊಹಮ್ಮದ್ ನಲಪಾಡ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಕೊಂಡ ಘಟನೆ ಇಂದು ನಡೆದಿದೆ.

ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ‌ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಇಷ್ಟು ಮಾತ್ರವಲ್ಲದೇ ಈಶ್ವರಪ್ಪ ಅವರನ್ನು ಹುಚ್ಚ ಎಂಬ ಘೋಷಣೆ ಕೂಡಾ ಕೂಗಿದ್ದಾರೆ.

Leave A Reply