ಫೆ.22-ಫೆ.24 ಚೆನ್ನಾವರ ಉಳ್ಳಾಕುಲು ಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ ಸಂಭ್ರಮ
ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಗಡಿಗುತ್ತು ಶ್ರೀ ಉಳ್ಳಾಕುಲು ಮಾಡ, ಗ್ರಾಮದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ಫೆ. 22ರಿಂದ 24ರವರೆಗೆ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಫೆ.22ರಂದು ಸಂಜೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನವಾಗಲಿದೆ. ಬಳಿಕ ಸಾಮೂಹಿಕ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಕಲಶ ಪೂಜೆ, ವಾಸ್ತು ಹೋಮ, ವಾಸ್ತು ಬಲಿ, ವಾಸ್ತು ಕಲಶಾಭಿಷೇಕ, ವಾಸ್ತು ಹೋಮ, ಅನ್ನಸಂತರ್ಪಣೆ ನಡೆಯಲಿದೆ.
ಫೆ.23ರಂದು ಬೆಳಗ್ಗೆ ಗಣಪತಿ ಹೋಮ, ತ್ರಿಕಾಲ ಪೂಜೆ, ಸ್ಥಳ ಶುದ್ಧಿ, ಬಿಂಬ ಶುದ್ಧಿ, ಕುಂಭೇಶ ಕರ್ಕರಿ ಪೂಜೆ, ಶಯ್ಯಾ ಪೂಜೆ, ಜೀವ ಉಧ್ವಾಸನ ಪೂಜೆ, ಶಯ್ಯಾಗಮನ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಅಧಿವಾಸ ಹೋಮ, ಕಲಶಾಧಿವಾಸ, ಕಲಶ ಪೂಜೆ, ಮಂಡಲ ಪೂಜೆ, ತ್ರಿಕಾಲ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಫೆ.24ರಂದು ಬೆಳಗ್ಗೆ ಗಣಪತಿಹೋಮ, ಪ್ರಾಸಾದ ಪ್ರತಿಷ್ಠೆ ನಡೆದು, ಬೆ. 8.18ರ ಮೀನ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಉಳ್ಳಾಕುಲು, ಗ್ರಾಮ ದೈವ ಅಬ್ಬೆಜಲಾಯ ಮತ್ತು ಸಪರಿವಾರ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಫೆ.23ರಂದು ಸಂಜೆನಡೆಯುವ ಧಾರ್ಮಿಕ ಸಭೆಯಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮತ್ತು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಉಪಸ್ಥಿತರಿರುತ್ತಾರೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.24ರಂದು ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮೂಡುಬಿದರೆ ಜೈನಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುತ್ತಾರೆ. ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಯಶೋಧಾ ರಾಮಚಂದ್ರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.23 ಮತ್ತು 24ರಂದು ಪೂರ್ವಾಹ್ನ, ಸಂಜೆ ಹಾಗೂ ರಾತ್ರಿ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಬ್ರಾಯ ಗೌಡ ಪಾಲ್ತಾಡಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಬೆಳಂದೂರುಗುತ್ತು ಧರ್ಮಪಾಲ ಆರಿಗ, ಶ್ರೀ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.