ಹಿಜಾಬ್‍ಗೆ ಅವಕಾಶ ನೀಡಿ ಎಂದು ಶಾಲಾವರಣದಲ್ಲಿ ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್ !!

Share the Article

ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಮನವಿ ಮಾಡಿದ್ದರು. ಆದರೆ ಶಿಕ್ಷಕರ ಮಾತು ಧಿಕ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಶಾಲಾ ಮಂಡಳಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ. ಈ ಬಗ್ಗೆ ಶಾಲೆಯ ಪ್ರಾಂಶುಪಾಲರನ್ನು ವಿಚಾರಿಸಿದರೆ ನಾವು ಯಾವುದೇ ವಿದ್ಯಾರ್ಥಿಗಳನ್ನು ಅಮಾನತು ಮಾಡಿಲ್ಲ. ವಿದ್ಯಾರ್ಥಿಗಳಿಗೆ ಹೆದರಿಸಲು ಈ ರೀತಿ ಹೇಳಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.

Leave A Reply