ಬಂಟ್ವಾಳ: ಕಲ್ಲಡ್ಕ ಸಮೀಪ ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ!! ಬೈಕ್ ಸವಾರನಿಗೆ ಗಾಯ| ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ ವಾಹನ ಸವಾರರೇ ಎಚ್ಚರ

Share the Article

ಕಲ್ಲಡ್ಕ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಇಂದು ನಸುಕಿನ ವೇಳೆ ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.

ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವಾರರ ಗಮನಕ್ಕೆ
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ಪ್ರಗತಿಯಲ್ಲಿದ್ದು, ರಸ್ತೆ ಬದಿಗಳಲ್ಲಿ ಬೃಹದಾಕಾರದ ಹೊಂಡಗಳು ತೆರೆದಿದ್ದು ರಾತ್ರಿ ಹೊತ್ತಿನಲ್ಲೂ ಬೆಳಕಿನ ಸಹಾಯದಿಂದ ಕಾಮಗಾರಿ ಭರದಿಂದ ಸಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯಾದ್ದರಿಂದ ಮುಂಜಾನೆ ಹಾಗೂ ಸಂಜೆಯ ಹೊತ್ತಿನಲ್ಲಿ ವಾಹನಗಳ ದಟ್ಟನೆಗಳು ಹೆಚ್ಚಾಗಿದ್ದು ವಿಟ್ಲ-ಉಪ್ಪಿನಂಗಡಿ-ಮಂಗಳೂರು ತೆರಳುವ ರಸ್ತೆಗಳು ಸಂಧಿಸುವ ಕಲ್ಲಡ್ಕದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ. ಈ ಮೊದಲು ಇಲ್ಲಿ ಹಲವು ಭೀಕರ ಅಪಘಾತಗಳು ನಡೆದು ಅನೇಕ ಸಾವು ನೋವು ಸಂಭವಿಸಿದ ಬಳಿಕ ಪೊಲೀಸ್ ಇಲಾಖೆಯಿಂದ ಮುಂಜಾಗ್ರತ ಕ್ರಮಗಳು ಪಾಲನೆಯಾಗಿತ್ತು. ರಸ್ತೆ ಕಾಮಗಾರಿ ಮುಗಿಯುವ ವರೆಗೂ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಜಾಗರೂಕತೆಯಿಂದ ಸಂಚರಿಸಬೇಕಾಗಿದೆ.

Leave A Reply