ಇನ್ನು ಮುಂದೆ ಜನನ, ಮರಣ ನೋಂದಣಿ ಪಿಡಿಒಗಳ ಜವಾಬ್ದಾರಿ !! | ಹೊಸ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Share the Article

ಜನನ-ಮರಣ ನೋಂದಣಾಧಿಕಾರಿಗಳ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿ ಬಲಪಡಿಸಲು ಹಾಗೂ ಶೇ.100 ರಷ್ಟು ಜನನ, ಮರಣ ನೋಂದಣಿ ದಾಖಲಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ಕೋರಲಾಗಿತ್ತು. ಇದಕ್ಕೆ ಕೇಂದ್ರ ಸರ್ಕಾರ ಸಹಮತ ವ್ಯಕ್ತಪಡಿಸಿತ್ತು. ಹಾಗಾಗಿ ಇದೀಗ ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ.

Leave A Reply