ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ!!!ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾದ ಗುಂಪು!

Share the Article

ಶಿವಮೊಗ್ಗ : ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹರ್ಷ ( 24) ಮೃತ ಯುವಕ. ದೊಡ್ಡಪೇಟೆ ಠಾಣೆಯಲ್ಲಿ ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಹಾಕಿದ್ದ ಪ್ರಕರಣ ದಾಖಲಾಗಿತ್ತು.

ಸಿಗೇಹಟ್ಟಿ ಬಡಾವಣೆ ನಿವಾಸಿಯಾಗಿದ್ದ ಹರ್ಷ, ಐದು ವರ್ಷಗಳಿಂದ ಭಜರಂಗದಳದ ಸಕ್ರಿಯ ಕಾರ್ಯಕರ್ತನಾಗಿದ್ದ. ಈ ಹಿಂದೆ ಎರಡು ಬಾರಿ ಈತನ ಮೇಲೆ ಅಟ್ಯಾಕ್ ಆಗಿತ್ತು. ಆದರೆ ನಿನ್ನೆ ಸ್ಕೆಚ್ ಹಾಕಿದ್ದ ದುಷ್ಕರ್ಮಿಗಳು , ಹರ್ಷನ ಮೇಲೆ ದಾಳಿ ಮಾಡಿದ್ದಾರೆ.

ಮೃತ ಯುವಕ ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದು, ಆತನಿಗೆ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಮೃತನ ಕುಟುಂಬದವರು ಹೇಳಿದ್ದಾರೆ.

ವಿವಿಧ ಸಂಘಟನೆಗಳು ಮೃತನ ಸಾವಿಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ಮೆಗ್ಗಾನ್ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದವು.

ಕೊಲೆ ನಂತರ ಹಳೆ ಶಿವಮೊಗ್ಗ ಪ್ರಕ್ಷುಬ್ಧಗೊಂಡಿದೆ. ಅಜಾದ್ ನಗರದಲ್ಲಿ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಶಿವಮೊಗ್ಗ ನಗರದ ಎಲ್ಲೆಡೆ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ.

Leave A Reply