ಬಜರಂಗದಳ ಕಾರ್ಯಕರ್ತ ಹರ್ಷ ಮೃತದೇಹದ ಮೆರವಣಿಗೆ ಸಂದರ್ಭದಲ್ಲಿ ಸಿಕ್ಕ ಸಿಕ್ಕಲ್ಲಿ ಕಲ್ಲುತೂರಾಟ!!!

Share the Article

ಶಿವಮೊಗ್ಗ : ನಿನ್ನೆ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿತ್ತು. ಪಾರ್ಥೀವ ಶರೀರದ ಮೆರವಣಿಗೆ ಸಂದರ್ಭ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ.

ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ಮನೆ ಇರುವಂತಹ ಬಸವನ ಬೀದಿಯವರೆಗೆ ಮೆರವಣಿಗೆಯಲ್ಲಿ ಮೃತದೇಹ ಕೊಂಡೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಮೆರವಣಿಗೆ ವೇಳೆಯಲ್ಲಿ ಎನ್ ಟಿ ರಸ್ತೆಯಲ್ಲಿ ಸಿಕ್ಕ ಸಿಕ್ಕ ಮನೆಗಳು, ವಾಹನಗಳ ಮೇಲೆ ರೊಚ್ಚಿಗೆದ್ದಂತ ವಿವಿಧ ಗುಂಪುಗಳು ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

Leave A Reply