ವಿಮಾನ ಪ್ರಯಾಣಿಕರಿಗೊಂದು ಸಿಹಿ ಸುದ್ದಿ : ಇನ್ನು ಮುಂದೆ RT- PCR ಪರೀಕ್ಷೆ ಅಗತ್ಯವಿಲ್ಲ!

Share the Article

ನವದೆಹಲಿ : ಭಾರತದಿಂದ ದುಬೈಗೆ ಪ್ರಯಾಣಿಸುವ ವಿಮಾನ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ನಡೆಸುವ ಆರ್ ಟಿ ಪಿ ಸಿ ಆರ್ ಪರೀಕ್ಷೆಗೆ ಒಳಗಾಗಬೇಕಿಲ್ಲ.

ದುಬೈಗೆ ಪ್ರಯಾಣಿಸಲು ಭಾರತದಿಂದ ಹೊರಡುವ ವೇಳೆ ವಿಮಾನ ನಿಲ್ದಾಣದಲ್ಲಿ ನಡೆಸಲಾದ ಕ್ಷಿಪ್ರ ಪಿಸಿಆರ್ ಪರೀಕ್ಷೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಏರ್ ಇಂಡಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೂ, ದುಬೈಗೆ ತೆರಳುವ ಪ್ರಯಾಣಿಕರು ನಿರ್ಗಮನಕ್ಕೆ 48 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿಸಿದೆ. ಅಲ್ಲದೆ ದುಬೈಗೆ ಆಗಮಿಸಿದ ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ.

Leave A Reply