ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿ ಸುದ್ದಿ; ಬಜೆಟ್ ನಲ್ಲಿ ವೇತನ ಹೆಚ್ಚಳ- ಹಾಲಪ್ಪ ಆಚಾರ್

Share the Article

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೇತನ ಹಾಗೂ ಭತ್ಯೆ ಹೆಚ್ಚಳ ಮಾಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿದ್ದು, ಬಜೆಟ್ ನಲ್ಲಿ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಭರವಸೆ ನೀಡಿದ್ದಾರೆ.

ಕೇಂದ್ರ ಸರಕಾರ 4500 ರೂ. ಹಾಗೂ ರಾಜ್ಯ ಸರಕಾರ ರೂ.7300 ಸೇರಿಸಿ ವೇತನ ಕೊಡುತ್ತಿದೆ. ಇದನ್ನು ಇನ್ನೂ ಹೆಚ್ಚಳ ಮಾಡಲು ಯತ್ನಿಸಲಾಗುವುದು ಎಂದು ಹೇಳಿದ್ದಾರೆ.

Leave A Reply