Home Education SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!

Hindu neighbor gifts plot of land

Hindu neighbour gifts land to Muslim journalist

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿನಿ ಬೇಬಿ,ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು,ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬುಧವಾರದಿಂದ ಆರಂಭವಾಗಿರುವ ಪೂರ್ವ ಸಿದ್ಧತಾ
ಪರೀಕ್ಷೆಗೆ ಈಕೆ ಹಾಜರಾಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ಬೇಬಿಯನ್ನು ಪರೀಕ್ಷೆಗೆ ಹಾಜರಾಗುವಂತೆ ಇಬ್ಬರು ವಿದ್ಯಾರ್ಥಿಗಳನ್ನು ಬೇಬಿಯ ಮನೆಗೆ ಕಳುಹಿಸಿದ್ದಾರೆ.ಆದರೆ ಶಾಲೆಗೆ ಹೋಗಲು ಆಸಕ್ತಿ ಇಲ್ಲದೇ ಇದ್ದ ಬೇಬಿ,ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.