ಮಳಿಗೆಯಲ್ಲಿ ಅಗ್ನಿ ಅವಘಡ !! | ಕಟ್ಟಡದಿಂದ ಹೊರ ಜಿಗಿದು ಪ್ರಾಣ ಉಳಿಸಿಕೊಂಡ ತಾಯಿ-ಮಗಳು

Share the Article

ಅಂಗಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ನಡೆದಿದ್ದು, ಈ ವೇಳೆ ಮಳಿಗೆಯ ಮೇಲಿನ ಮನೆಯಲ್ಲಿದ್ದ ತಾಯಿ, ಮಗಳು ಹೊರಕ್ಕೆ ಜಿಗಿದು ಜೀವ ಉಳಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.

ಭಾರತಿ ಮಡಿವಾಳ್ ಹಾಗೂ ಈಕೆಯ ಮಗಳು ಮೇಘನಾ ಮಡಿವಾಳ ಪ್ರಾಣಾಪಾಯದಿಂದ ಪಾರಾದವರಾಗಿದ್ದಾರೆ. ಕಟ್ಟಡಕ್ಕೆ ಬೆಂಕಿ ತಗಲುತ್ತಿದ್ದಂತೆಯೇ ಮಾಳಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು ಹೊರಕ್ಕೆ ಬರಲಾರದ ಸ್ಥಿತಿ ನಿರ್ಮಾಣವಾಗಿತ್ತು. ತಾಯಿ, ಮಗಳಿಬ್ಬರೂ ಪ್ರಾಣ ಉಳಿಸಿಕೊಳ್ಳಲು ಮಾಳಿಗೆಯಿಂದ ಜಿಗಿದಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಚಾದರ ಬಳಸಿ ಹಿಡಿದು ರಕ್ಷಣೆ ಮಾಡಿದ್ದಾರೆ.

ಮಳಿಗೆಗೆ ಬೆಂಕಿ ತಗುಲಿದ್ದರಿಂದ ಭಾರತಿ ಅವರಿಗೆ ಸೇರಿದ್ದ ಮೇಘನಾ ಟೇಲರ್ ಅಂಗಡಿ, ಪಕ್ಕದಲ್ಲಿರುವ ರಂಗನಾಥ ರಾಯ್ಕರ್ ಅವರಿಗೆ ಸೇರಿದ ಬ್ಯೂಟಿ ಪಾರ್ಲರ್ ಮಳಿಗೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಉಪಕರಣಗಳು ಸುಟ್ಟು ಹೋಗಿವೆ. ಇದೀಗ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದು, ಸ್ಥಳಕ್ಕೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Leave A Reply