ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಬಂದ್!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಮೆಜಿಸ್ಟಿಕ್ ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅನಿರ್ದಿಷ್ಟ ಅಹೋರಾತ್ರಿ ಧರಣಿ ನಡೆಸುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ.
ಮಾರ್ಚ್ 4 ರಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಬೃಹತಗ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಕಳೆದ 2014 ರಿಂದಲೂ ಅನೇಕ ಮನವಿಯನ್ನು ಸಲ್ಲಿಸಿದ್ದರೂ ಹೋರಾಟಗಳನ್ನು ನಡೆಸಿದ್ದರೂ ಸರಕಾರ ನಿರ್ಲಕ್ಷ್ಯ ವಹಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೌಕರರ ಪ್ರಮುಖ ಬೇಡಿಕೆಗಳಾದ 2006 ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನಿವೃತ್ತರಾಗಿರುವ ನೌಕರರ ಸೇವಾ ಅವಧಿಯನ್ನು ಕಾಲ್ಪನಿಕವಾಗಿ ಪರಿಗಣಿಸಿ, ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವುದು.
2006 ರ ನಂತರ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ಸರಕಾರಿ ನೌಕರರಿಗೆ ನೀಡಬೇಕು ಹಾಗೂ ನೌಕರರ ಪಾಲಿನ ಶೇ.14 ರಷ್ಟು ಹಣವನ್ನು ಆಡಳಿತ ಮಂಡಳಿಗೆ ನೀಡುವಂತೆ ಒತ್ತಾಯಿಸಿದ್ದಾರೆ.
ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಆರೋಗ್ಯ ಸಿರಿ ( ಜ್ಯೋತಿ ಸಂಜೀವಿನಿ) ಯೋಜನೆಯನ್ನ ಜಾರಿಗೆ ತರಬೇಕು. ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲು ವಿಧಿಸಿರುವ ನಿಯಮಗಳನ್ನು ಸಡಿಲಗೊಳಿಸಬೇಕು. ಸರಕಾರಿ ಶಾಲಾ ಮಕ್ಕಳಿಗೂ ನೀಡಬೇಕೆಂದು ಮನವಿ ಮಾಡಿದ್ದಾರೆ.