ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಸಂಬಂಧ ಭಾರತೀಯರ ರಕ್ಷಣೆ ಕುರಿತು ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ !! | ಸಂಪುಟದ ಸಚಿವರನ್ನು ಉಕ್ರೇನ್ ನ ನೆರೆ ರಾಷ್ಟ್ರಗಳಿಗೆ ಕಳುಹಿಸಲು ನಿರ್ಧಾರ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧ ಜನತೆಗೆ ಭಯಭೀತರನ್ನಾಗಿ ಮಾಡಿಸಿದೆ.ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಈ ನಿಟ್ಟಿನಲ್ಲಿ ಅವರನ್ನ ಸ್ವದೇಶಕ್ಕೆ ಕರೆ ತರುವ ಪ್ರಯತ್ನ ನಡೆಯುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಈ ಸಭೆಯಲ್ಲಿ ಕೆಲವು ಕೇಂದ್ರ ಸಚಿವರನ್ನ ಉಕ್ರೇನ್ ಅಕ್ಕಪಕ್ಕದ ದೇಶಗಳಿಗೆ ಕಳುಹಿಸಲು ಭಾರತ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.ದೆಹಲಿಯ ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ವಿದೇಶಾಂಗ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದು ಉಕ್ರೇನ್ ಬಿಕ್ಕಟ್ಟಿನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು .
ಕೇಂದ್ರ ಸರ್ಕಾರದ ಉನ್ನತ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಮೋದಿ ಸಂಪುಟದ ಕೆಲವು ಸಚಿವರು ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ಹೋಗಲಿದ್ದಾರೆ. ಆ ಸಚಿವರು ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನ ಸುಲಭವಾಗಿ ಕರೆ ತರಲು ಸಹಾಯ ಮಾಡಲಿದ್ದಾರೆ. ಜೊತೆಗೆ ವೀಸಾ ಹಾಗೂ ಇತರೆ ರಾಜತಾಂತ್ರಿಕವಾಗಿ ಸಮಸ್ಯೆಗಳನ್ನ ಸ್ಥಳದಲ್ಲೇ ಖುದ್ದು ಪರಿಹರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.
ಉಕ್ರೇನ್ ಗೆ ಜ್ಯೋತಿರಾಧಿತ್ಯ ಸಿಂದಿಯಾ,ಹರ್ದಿಪ್ ಸಿಂಗ್ ಪೂರಿ,ಕಿರಿಣ್ ರಿಜಿಜು ವಿಕೆ ಸಿಂಗ್ ರವರು ಹೋಗಲಿದ್ದು, ಭಾರತೀಯರನ್ನು ಕರೆ ತರುವಲ್ಲಿ ಯಶಸ್ವಿಯಾಗಲಿದ್ದಾರೆ.ಸಭೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರನ್ನು ಸ್ಥಳಾಂತರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಮೋದಿ ಹೇಳಿದರು. ಮೋದಿ ಅವರು ಉತ್ತರ ಪ್ರದೇಶದಿಂದ ಹಿಂದಿರುಗಿದ ತಕ್ಷಣ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅಲ್ಲಿ ಅವರು ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿಯ ಪ್ರಚಾರದ ಭಾಗವಾಗಿ ರಾಲಿಯಲ್ಲಿ ಭಾಗವಹಿಸಿದ್ದರು.