ಬಂಟ್ವಾಳ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು!

Share the Article

ಬಂಟ್ವಾಳ : ಆರ್ ಎಸ್ ಎಸ್ ಪ್ರಮುಖ‌ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವುದು ಅಷ್ಟು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದ ಶಾಂತಿ ಕದಡಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಾ.ಪ್ರಭಾಕರ ಭಟ್ ಅವರು ರಾಷ್ಟ್ರಧ್ವಜದ ಕುರಿತು ಕೀಳಾಗಿ ಮಾತನಾಡುವ ಜೊತೆಗೆ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ. ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಆತಂಕವಿದೆ ಎಂದು ದೂರುದಾರರು ದೂರಿನಲ್ಲಿ ತಿಳಿಸಿದ್ದಾರೆ.

Leave A Reply