ಮಂಗಳೂರು: ನಾಪತ್ತೆಯಾಗಿದ್ದ ಹೈಸ್ಕೂಲ್ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

Share the Article

ನಾಪತ್ತೆಯಾಗಿದ್ದ ಮಂಗಳೂರಿನ ಪ್ರೌಢಶಾಲೆಯೊಂದರಲ್ಲಿ ಓದುತ್ತಿದ್ದ ಶಾಲಾ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ದೃಶ್ಯಂತ್(16) ಮೃತ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕ ದೃಶ್ಯಂತ್ ಇಲ್ಲಿನ ಮಹಾಕಾಳಿ ಪಡ್ಡು ಮೈದಾನದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ ನಿರ್ವಹಿಸುತ್ತಿದ್ದ. ಪಂದ್ಯ ಮುಗಿಯುತ್ತಿದ್ದಂತೆಯೇ ಆತನ ಸ್ನೇಹಿತರು ಪಂದ್ಯ ಮುಗಿಸಿ ತೆರಳಿದ್ದರು. ಆದರೆ ಈತ ಮಾತ್ರ ಮನೆ ತಲುಪಿಲ್ಲ ಎಂದು ವರದಿಯಾಗಿತ್ತು.

ಆತನ ಸ್ನೇಹಿತರು, ಸಂಬಂಧಿಕರು ಮತ್ತು ಇತರ ಪರಿಚಿತ ವ್ಯಕ್ತಿಗಳೊಂದಿಗೆ ಆತನ ಬಗ್ಗೆ ವಿಚಾರಣೆ ನಡೆಸಲಾಯಿತಾದರೂ, ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ನಾಪತ್ತೆಯಾಗಿರುವ ಬಗ್ಗೆ ಆತನ ತಾಯಿ ಆಶಾ ಅವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಆದರೆ ಇದೀಗ ಹೊಗೆಬಜಾರ್‌ನ ನೇತ್ರಾವತಿ ನದಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Leave A Reply