ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ !! | ಈ ಸಾಲ ಸೌಲಭ್ಯ ಪಡೆಯಲು ಬೇಕಾಗಿರುವ ಮಾನದಂಡಗಳ ಕುರಿತು ಇಲ್ಲಿದೆ ಮಾಹಿತಿ
ಕೇಂದ್ರ ಸರ್ಕಾರ ರೈತರಿಗಾಗಿ ಅದೆಷ್ಟೋ ಸಾಲ ಸೌಲಭ್ಯದ ಯೋಜನೆಗಳನ್ನು ನೀಡುತ್ತಿದೆ. ಇದೀಗ ರೈತರ ಕೃಷಿ ಚಟುವಟಿಕೆಗೆ 3 ಲಕ್ಷ ರೂಪಾಯಿಯವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ಸಿಗುತ್ತದೆ. ಹೌದು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳ ಮೂಲಕ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರ ಹಾಗೂ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಸಾಲಕ್ಕಿರುವ ಕೆಲವು ಷರತ್ತುಗಳನ್ನು ಸರ್ಕಾರ ಸಡಿಲಗೊಳಿಸಿದೆ. ಇದಕ್ಕಿಂತ ಮುಂಚೆ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬೇಕಾದರೆ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕೆಲವು ಷರತ್ತುಗಳನ್ನು ಸಡಿಲಗೊಳಿಸಿದೆ.
ಶೂನ್ಯ ಬಡ್ಡಿದರದಲ್ಲಿ ರೈತರಿಗೆ ನೀಡಲಾಗುವ ಸಾಲಕ್ಕೆ ಇದಕ್ಕಿಂತ ಮುಂಚಿತವಾಗಿ ಒಂದು ಕುಟುಂಬಕ್ಕೆ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುತ್ತಿತ್ತು. ಈಗ ಈ ಷರತ್ತನ್ನು ಈಗ ಸಡಿಲಗೊಳಿಸಲಾಗಿದೆ. ಒಂದು ಕುಟುಂಬಕ್ಕೆ ಬದಲಾಗಿ ಈಗ ಕುಟುಂಬದ ಒಬ್ಬ ವ್ಯಕ್ತಿಗೆ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುವುದು.
ರೈತರು ಎರಡು ಸಂಘಗಳ ಕಾರ್ಯವ್ಯಾಪ್ತಿಯಲ್ಲಿ ಬೇರೆ ಬೇರೆ ಭೂಮಿ ಹೊಂದಿದ್ದರೆ ಅಥವಾ ಭೂಮಿ ಮತ್ತು ವಾಸಸ್ಥಳ ವಿವಿಧ ಸಂಘಗಳ ವ್ಯಾಪ್ತಿಯಲ್ಲಿದ್ದರೆ ಯಾವ ಸಂಘದ ವ್ಯಾಪ್ತಿಯಲ್ಲಿ ವಾಸವಿರುತ್ತಾನೆಯೇ ಆ ಸಂಘದಲ್ಲಿ ಪಡೆದ ಸಾಲಗಳಿಗೆ ಮಾತ್ರ ಬಡ್ಡಿ ಸಹಾಯಧನ ಅನ್ವಯವಾಗುತ್ತಿತ್ತು. ಆದರೆ ಇದೀಗ ಈ ಷರತ್ತನ್ನು ಸಡಿಲಗೊಳಿಸಿ ಎರಡು ಸಹಕಾರ ಸಂಘಗಳಲ್ಲಿ ಸಾಲ ಪಡೆದಿದ್ದಲ್ಲಿ ಒಂದು ಸಂಘದಲ್ಲಿ ಮಾತ್ರ ರಿಯಾಯಿತಿ ಬಡ್ಡಿದರವನ್ನು ಪಡೆಯಬಹುದು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ರೈತರು ಸಾಲ ಪಡೆಯಬಹುದು. ಈ ಬ್ಯಾಂಕಿನಲ್ಲಿ ರೈತರಿಗೆ 3 ಲಕ್ಷರೂಪಾಯಿಯವರೆಗೆ ಸಾಲ ನೀಡಲಾಗುವುದು. ಕೃಷಿ ಚಟುವಟಿಕೆಗಾಗಿ ಅಲ್ಪಾವಧಿ ಬೆಳೆ ಸಾಲವನ್ನು 3 ಲಕ್ಷ ರೂಪಾಯಿಯವರೆಗೆ ನೀಡಲಾಗುವುದು. ಅದೇ ರೀತಿ ಪಶುಸಂಗೋಪನೆ ಹಾಗೂ ಮೀನುಗಾರಿಕೆಗಾಗಿ 2 ಲಕ್ಷ ರೂಪಾಯಿ ವರೆಗೆ ಸಾಲ ಶೂನ್ಯ ಬಡ್ಡಿದರದಲ್ಲಿ ಸಾಲ
ನೀಡಲಾಗುವುದು.
ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬೇಕಾದರೆ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ಸದಸ್ಯತ್ವ ಹೊಂದಿರಬೇಕು. ರೈತರು ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ನಿಗದಿತ ನಮೂನೆಗಳಲ್ಲಿ ಸಂಘಗಳಿಗೆ ಅರ್ಜಿ ಸಲ್ಲಿಸಬೇಕು. ರೈತರು ಪಹಣಿ ಮೇಲೆ ಬೇರೆ ಬ್ಯಾಂಕುಗಳಲ್ಲಿ ಸಾಲ ಪಡೆದಿರಬಾರದು. ರೈತ ವಾಸವಿರುವ ಸ್ಥಳದ ಸಂಘ ಅಥವಾ ಭೂಮಿ ಹೊಂದಿರುವ ಸ್ಥಳದ ಸಂಘ ಈ ಮೂರರಲ್ಲಿ ಯಾವುದಾದರೊಂದು ಸಂಘದ ವ್ಯಾಪ್ತಿಯಲ್ಲಿ ಮಾತ್ರ ಸಾಲ ಪಡೆಯಬೇಕು. ಒಂದು ಜಿಲ್ಲೆಅಥವಾತಾಲೂಕಿನ ಹೋಬಳಿಯಲ್ಲಿರುವ ರೈತರು ಇನ್ನೊಂದು ಜಿಲ್ಲೆಯ ಹೋಬಳಿಯಲ್ಲಿ ಶೂನ್ಯ ಬಡ್ಡಿದರದಲ್ಲಿಸಾಲ ಪಡೆಯುವಂತಿಲ್ಲ. ಪಹಣಿಯೊಂದಿಗೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಇತ್ತೀಚಿನ ಫೋಟೋ ಹೊಂದಿರಬೇಕು. ವಿಶೇಷವಾಗಿ ರೈತರು ಸಂಘದ ಸದಸ್ಯರಾಗಿರಬೇಕು.
ಕೃಷಿಗೆ ಸಂಬಂಧಿಸಿದ ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಜೇನುಸಾಕಾಣಿಕೆ, ಕೋಳಿಸಾಕಾಣಿಕೆ ಸೇರಿದಂತೆ ಇನ್ನಿತರ ಕೃಷಿ ಚಟುವಟಿಕೆಗೆ ಸಾಲ ನೀಡಲಾಗುವುದು. ಕೃಷಿ ಚಟುವಟಿಕೆಯೊಂದಿಗೆ ಟ್ರ್ಯಾಕ್ಟರ್, ಟಿಲ್ಲರ್, ಸ್ಪಿಂಕ್ಲರ್, ಹೈನುಗಾರಿಕೆ ಘಟಕಗಾಗಿ 10 ಲಕ್ಷ ರೂಪಾಯಿಯವರೆಗೆ ಶೇ. 3 ಬಡ್ಡಿ ದರದಲ್ಲಿ ಮಧ್ಯಮಾವಧಿಸಾಲ ನೀಡಲಾಗುವುದು. ಅದಲ್ಲದೆ ಬ್ಯಾಂಕಿನಿಂದ ಪಡೆದುಕೊಂಡ ಸಾಲವನ್ನು ಅವಧಿಯೊಳಗೆ ಮರುಪಾವತಿ ಮಾಡಿದಲ್ಲಿ ಪಡೆದುಕೊಂಡ ಸಾಲಕ್ಕೆ ಬಡ್ಡಿ ಇರುವುದಿಲ್ಲ. ಅವಧಿ ಮೀರಿದ ನಂತರ ಸಾಲಕ್ಕೆ ಬಡ್ಡಿ ವಿಧಿಸಲಾಗುವುದು.