ಮಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ವಿವಾದ!! ಎರಡು ಗುಂಪಿನ ವಿದ್ಯಾರ್ಥಿಗಳಿಂದ ಮಾತಿನ ಚಕಮಕಿ-ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

Share the Article

ಮಂಗಳೂರಿನ ಹೃದಯ ಭಾಗದಲ್ಲಿರುವ ಕಾಲೇಜೊಂದರಲ್ಲಿ ಹಿಜಾಬ್ ವಿವಾದ ಎದ್ದಿದ್ದು, ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ ಘಟನೆಯ ಬಗ್ಗೆ ವರದಿಯಾಗಿದೆ.

ಮಂಗಳೂರಿನ ಕಾರ್ಸ್ಟ್ರೀಟ್ ನಲ್ಲಿರುವ ಡಾ.ಪಿ ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಅನುಮತಿಯ ಮೇರೆಗೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು.ಇದಕ್ಕೆ ಹಿಂದೂ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಪರೀಕ್ಷೆ ಬರೆಯಲು ಅನುಮತಿ ನೀಡದಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭ ಎರಡೂ ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ಕೈ ಮೀರುವ ಹೊತ್ತಿಗಾಗಲೇ ಪೊಲೀಸರು ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

ಬಳಿಕ ಪ್ರಾಂಶುಪಾಲರ ಮುಂದಾಳತ್ವದಲ್ಲಿ ಪೋಷಕರ ಸಭೆ ಕರೆದು ಎರಡೂ ಕಡೆಯ ವಿದ್ಯಾರ್ಥಿಗಳಿಗೆ ತಿಳಿಹೇಳಿ ಪ್ರಕರಣವನ್ನು ತಿಳಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Leave A Reply