Home ದಕ್ಷಿಣ ಕನ್ನಡ ಪುತ್ತೂರು : ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ !! | ಪೋಕ್ಸೋ...

ಪುತ್ತೂರು : ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ !! | ಪೋಕ್ಸೋ ಕಾಯ್ದೆಯಡಿ ಯುವಕನ ಬಂಧನ

Hindu neighbor gifts plot of land

Hindu neighbour gifts land to Muslim journalist

ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪೋಕ್ಸೋ ಅಡಿಯಲ್ಲಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ.

ಸಂತ್ರಸ್ತ ಬಾಲಕಿಯನ್ನು ರಕ್ಷಿತ್ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆರೋಪಿ ರಕ್ಷಿತ್ ಬಾಲಕಿ ಇರುವ ಹಾಸ್ಟೆಲ್ ಫೋನ್‌ಗೆ ಕರೆ ಮಾಡಿದ್ದ. ಹಾಸ್ಟೆಲ್‌ನ ವಾರ್ಡನ್ ಫೋನ್ ಎತ್ತಿದಾಗ ಆರೋಪಿ ತನ್ನನ್ನು ಸಂತ್ರಸ್ತೆಯ ಅಣ್ಣ ಎಂದು ಪರಿಚಯಿಸಿಕೊಂಡಿದ್ದಾನೆ. ರಕ್ಷಿತ್ ಸಂತ್ರಸ್ತ ಬಾಲಕಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಹಾಸ್ಟೆಲ್‌ನ ಗೇಟ್‌ನ ಹೊರಗೆ ಭೇಟಿಯಾಗುವಂತೆ ಒತ್ತಾಯಿಸಿದ್ದಾನೆ. ಅದಲ್ಲದೆ ಆಕೆ ಬರದಿದ್ದರೆ ಕೊಲ್ಲುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ.

ಬೆದರಿಕೆಯಿಂದ ಹೆದರಿದ ಬಾಲಕಿ ಆರು ದಿನಗಳ ಹಿಂದೆ ಬೀರಮಲೆ ಬೆಟ್ಟದಲ್ಲಿ ರಕ್ಷಿತ್ ನನ್ನು ಭೇಟಿಯಾಗಿದ್ದಳು. ಅಲ್ಲಿ ಆರೋಪಿಯು ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ಪೋಷಕರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ಸಂತ್ರಸ್ತ ಬಾಲಕಿಯ ತಂದೆಯಿಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ನಂತರವೂ ಆರೋಪಿ ರಕ್ಷಿತ್ ಆಕೆಗೆ ಪದೇ ಪದೇ ಕರೆ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.