ಮಾಣಿ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ, ದ್ವಿಚಕ್ರ ವಾಹನದಲ್ಲಿದ್ದ ಶಾಲಾ ಬಾಲಕ ಗಂಭೀರ

Share the Article

ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ರವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11 ವ.) ಗಂಭೀರ ಗಾಯಗೊಂಡಿದ್ದು, ದಿನೇಶ್ ರವರಿಗೂ ಗಾಯವಾಗಿದೆ.

ಬುಡೋಳಿಯ ವಿಸ್ಮ್ ಶಾಲೆಯ ಆರನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿ ಅದ್ವಿತ್ ಸಾಯಂಕಾಲ ಶಾಲೆ ಬಿಟ್ಟು ತಂದೆ ದಿನೇಶ್ ರವರ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಗಂಭೀರ ಗಾಯಗೊಂಡ ಬಾಲಕನನ್ನು ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿ ಸಮೀಪ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

Leave A Reply