ಉಡುಪಿ : ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಹಲ್ಲೆ

Share the Article

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ.

ತಲ್ಲೂರು ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ಸಾಗಾಟದ ಲಾರಿ ಚಾಲಕ ಮಹಮ್ಮದ್ ಇಸಾಕ್ ಅವರಿಗೆ ಕೋಟೇಶ್ವರ ಹಾಲಾಡಿ ರಸ್ತೆಯ ಅಸೋಡು ನಂದಿಕೇಶ್ವರ ದೇಗುಲದ ಕಮಾನು ಬಳಿ ಹಿಂದಿನಿಂದ ಬಂದ ರಿಟ್ಸ್ ಕಾರಿನ ಚಾಲಕ ಕಾರನ್ನು ಮುಂದಕ್ಕೆ ತಂದು ನಿಲ್ಲಿಸಿ ಹಲ್ಲೆಗೈದಿದ್ದಾನೆ.

ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾರು ಚಾಲಕನ ಈ ನಡೆಗೆ ಕಾರಣ ತಿಳಿದು ಬಂದಿಲ್ಲ. ಕಾರು ಚಾಲಕನ ವಿರುದ್ಧ ಇಸಾಕ್ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply