Home ಬೆಂಗಳೂರು Re Exam : ಪರೀಕ್ಷೆ ಬರೆಯದೇ ಪಾಸ್ ಆದ ವಿದ್ಯಾರ್ಥಿಗಳಿಗೆ ಶಾಕ್ | ಪರೀಕ್ಷೆ ಮತ್ತೆ...

Re Exam : ಪರೀಕ್ಷೆ ಬರೆಯದೇ ಪಾಸ್ ಆದ ವಿದ್ಯಾರ್ಥಿಗಳಿಗೆ ಶಾಕ್ | ಪರೀಕ್ಷೆ ಮತ್ತೆ ಬರೆಯಲು ಸೂಚನೆ

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ 2019-20 ನೇ ಸಾಲಿನಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿತ್ತು. ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸ ಬೇಕೆಂದು ಕುಲಪತಿ ಪ್ರೊ.ವೀರಭದ್ರಯ್ಯ ತಿಳಿಸಿದ್ದಾರೆ.

2019-20 ನೇ ಸಾಲಿನಲ್ಲಿ ಕೋವಿಡ್ ನಿಂದಾಗಿ ಪರೀಕ್ಷೆಯನ್ನು ನಡೆಸದೆಯೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಈ ಸಂಬಂಧ ಸಿಂಡಿಕೇಟ್ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿವಿಯು ಸುಮಾರು 24 ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದರ ಕುರಿತು ಸಿಂಡಿಕೇಟ್ ಸದಸ್ಯರೇ ರಾಜ್ಯಪಾಲರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ದೂರು ನೀಡಿದ್ದರು. ಇದೀಗ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಕಾನೂನು ತೊಡಕಿನ ಕುರಿತು ಸಲಹೆ ಪಡೆಯಲು ಕುಲಸಚಿವರಿಗೆ ಸೂಚನೆ ನೀಡಲಾಗಿದೆ.