ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು
ಉಪ್ಪಿನಂಗಡಿ : ಹಿಜಾಬ್ ವಿಚಾರಣೆ ಬಳಿಕ ತರಗತಿಗಳಿಗೆ ಹಿಜಾಬ್ ಧರಿಸದಂತೆ ಹೈಕೋರ್ಟ್ ನೀಡಿದ ತೀರ್ಪು ಬೆನ್ನಲ್ಲೇ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಲೆ ಇದೆ.ಇದೀಗ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸುವ ಮೂಲಕ ತೀರ್ಪು ವಿರೋಧಿಸಿದ್ದಾರೆ.
ಕಾಲೇಜಿನಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು,ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಹಾಜರಾಗಿದ್ದರು.ಈ ವೇಳೆ ಕಾಲೇಜು ಆಡಳಿತ ಮಂಡಳಿ ತರಗತಿ ಪ್ರವೇಶ ನಿರಾಕರಿಸಿದ್ದಾರೆ.ಪರೀಕ್ಷೆಯನ್ನು ಬಹಿಷ್ಕರಿಸಿದ ವಿದ್ಯಾರ್ಥಿನಿಯ ತಂಡ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವಂತೆ ಕಾಲೇಜು ಬಳಿ ಜಮಾವಣೆಗೊಂಡು ಗಲಾಟೆ ಮಾಡಿದ್ದಾರೆ.
ಬಳಿಕ ಕಾಲೇಜು ಆಡಳಿತ ಮಂಡಳಿ ಮುಸ್ಲಿಂ ಸಮುದಾಯದ ನಾಯಕರನ್ನು ಕರೆಸಿ ಈ ಮೂಲಕ ವಿದ್ಯಾರ್ಥಿಗಳ ಮನವೊಲಿಕೆ ಮಾಡಿ ಕ್ಯಾಂಪಸ್ ನಿಂದ ಹೊರ ಕಳುಹಿಸಿದೆ.ಹಿಜಾಬ್ ಧರಿಸಿಯೆ ಪರೀಕ್ಷೆ ಬರೆಯುತ್ತೇವೆ ಎಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು ಮನೆಗೆ ಮರಳಿದ್ದಾರೆ.