ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವು, ಓರ್ವನ ಸ್ಥಿತಿ ಗಂಭೀರ

Share the Article

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು.

ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಓರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

Leave A Reply