ಕಡಬ ಠಾಣೆಯ ಪೊಲೀಸ್ ಅಧಿಕಾರಿ ಎಸ್.ಐ.ರುಕ್ಮ ನಾಯ್ಕ್ ಬೆಳ್ಳಾರೆಗೆ ವರ್ಗಾವಣೆ!

Share the Article

ಕಡಬ ಠಾಣೆಯ ಠಾಣಾಧಿಕಾರಿ ಎಸ್.ಐ ರುಕ್ಮನಾಯ್ಕ್ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬೆಳ್ಳಾರೆ ಠಾಣೆ ಎಸ್.ಐ ಆಂಜನೇಯ ರೆಡ್ಡಿ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಪಶ್ಚಿಮ ವಲಯ ಐಜಿಪಿ ಕಛೇರಿ ಈ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಿಂದ ಕಡಬ ಠಾಣಾ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರುಕ್ಮನಾಯ್ಕ್ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಸಫಲರಾಗಿದ್ದರು. ಅಲ್ಲದೆ ನಾಪತ್ತೆ ಪ್ರಕರಣಗಳನ್ನು ತ್ವರಿತವಾಗಿ ಪತ್ತೆಹಚ್ಚಿ, ಠಾಣೆಯ ಅಭಿವೃದ್ಧಿಗೆ ಶ್ರಮಿಸಿದ್ದರು. ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

Leave A Reply