ಗಂಗೊಳ್ಳಿ: ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನದಿಗೆ ಹಾರಿ ಆತ್ಮಹತ್ಯೆ

Share the Article

ವ್ಯಕ್ತಿಯೊಬ್ಬರು ಅಸ್ತಮಾ ಖಾಯಿಲೆಯಿಂದ ನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.

ಗುಜ್ಜಾಡಿ ಬಸ್ ನಿಲ್ದಾಣದ ಬಳಿಯ ನಿವಾಸಿ ರಘುನಾಥ ಮೇಸ್ತ (60) ಮೃತ ವ್ಯಕ್ತಿ. ರಘುನಾಥ ಅವರು ತಮ್ಮ ಬೈಕ್ ನ್ನು ಅರಾಟೆ ಸೇತುವೆ ಮೇಲೆ ನಿಲ್ಲಿಸಿ ಸೇತುವೆ ಮೇಲಿಂದ ಕೆಳಗೆ ಸೌಪರ್ಣಿಕಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಿಂದ ರಾತ್ರಿ ಹೋದವರು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಸಮಯಗಳಿಂದ ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಪಡೆದರೂ ಗುಣವಾಗದೆ ಇದ್ದುದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ.

Leave A Reply