Home ದಕ್ಷಿಣ ಕನ್ನಡ ಮಂಗಳೂರು : ದೇರಳಕಟ್ಟೆ ಸಮೀಪ ಕಾರೊಂದು ರಸ್ತೆ ವಿಭಜಕ ದಾಟಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ| ಇಬ್ಬರಿಗೆ...

ಮಂಗಳೂರು : ದೇರಳಕಟ್ಟೆ ಸಮೀಪ ಕಾರೊಂದು ರಸ್ತೆ ವಿಭಜಕ ದಾಟಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ| ಇಬ್ಬರಿಗೆ ಗಂಭೀರ ಗಾಯ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದಾರಿದೀಪಗಳಿಗೆ ಬಡಿದು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ದೇರಳಕಟ್ಟೆ ಸಮೀಪ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಕಾರು ಚಾಲಕ ಸೊಫೈಲ್ ಹಾಗೂ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಣಾಜೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಮಧ್ಯೆ ಅಳವಡಿಸಲಾದ ದಾರಿದೀಪದ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ವಿಭಜಕ ಏರಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.