ಶಾಕಿಂಗ್ ನ್ಯೂಸ್ ; ಬೆಂಗಳೂರಿನ ನಾಲ್ಕು ಕಡೆ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಇ-ಮೇಲ್!!!

ರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶವೊಂದು ಬಂದಿದೆ.

 

ಇಂದು ಸುದ್ದಿಗೋಷ್ಠಿಯಲ್ಲಿ
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ಮಾಹಿತಿ ನೀಡಿದ್ದಾರೆ. ಸೂಳಕುಂಟೆಯ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ನಾಲ್ಕು ಶಾಲೆಗಳನ್ನು ಗುರಿಯಾಗಿಟ್ಟುಕೊಂಡು ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ. ಇಮೇಲ್ ಆಧರಿಸಿ ಹೆಣ್ಣೂರು ಮತ್ತು ಹೆಬ್ಬುಗೋಡಿಯ ಖಾಸಗಿ ಶಾಲೆಗಳಿಗೆ ಬಾಂಬ್ ಸ್ಕ್ಯಾಡ್, ಶ್ವಾನ ದಳ ಮೂಲಕ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಶಾಲೆಗಳಿಂದ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಲಾಗಿದೆ ಎಂದು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಶಾಲೆಗಳಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

Leave A Reply

Your email address will not be published.