ಸಹಾಯ ಬೇಡಿ ಬಂದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಮಾಂತ್ರಿಕ!

Share the Article

ಮಹಿಳೆಯೊಬ್ಬರ ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ಮಾಂತ್ರಿಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಶನಿವಾರ ರಾತ್ರಿ ಜಿಲ್ಲೆಯ ಮಂಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಔಷಧಿ ತೆಗೆದುಕೊಂಡರೂ ಅನಾರೋಗ್ಯದಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮಾಂತ್ರಿಕನನ್ನು ಸಂಪರ್ಕಿಸಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ತನ್ನ ಕಾಯಿಲೆಗಳನ್ನು ಗುಣಪಡಿಸುವ ನೆಪದಲ್ಲಿ ಆತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

Leave A Reply