ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ಬಂದ್-ನಶೆಪ್ರಿಯರಲ್ಲಿ ಹೆಚ್ಚಿದ ಆತಂಕ!!|ಯಾವೆಲ್ಲಾ ಪ್ರದೇಶದಲ್ಲಿ ಎಣ್ಣೆ ಸಿಗಲ್ಲ ಗೊತ್ತಾ!?

Share the Article

ನಿನ್ನೆ ರಾಮನವಮಿ ಪ್ರಯುಕ್ತ ಬೆಂಗಳೂರಿನ ಪ್ರದೇಶದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿತ್ತು. ಇದೀಗ ಇಂದು ಮತ್ತು ನಾಳೆ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಕೋದಂಡರಾಮಸ್ವಾಮಿ ಪಲ್ಲಕ್ಕಿ ಉತ್ಸವ ಹಿನ್ನೆಲೆ 2 ದಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಆಗಿರಲಿದ್ದು,ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ.

ಅಲ್ಲದೆ, ಏಪ್ರಿಲ್ 13, 14 ರಂದು ಮುತ್ಯಾಲಮ್ಮ ದೇವಿ ರಥೋತ್ಸವ ಹಿನ್ನೆಲೆ ಭಾರತೀನಗರ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.ಪೂರ್ವ ವಿಭಾಗದ ಭಾರತೀನಗರ, ಕಮರ್ಷಿಯಲ್ ಸ್ಟ್ರೀಟ್, ಪುಲಿಕೇಶಿ ನಗರ, ಶಿವಾಜಿನಗರ, ಡಿಜೆ ಹಳ್ಳಿ ಸೇರಿದಂತೆ ಉತ್ತರ ವಿಭಾಗದ ಜೆ.ಸಿ.ನಗರ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 13, 14 ರಂದು ಮದ್ಯ ಮಾರಾಟ ನಿಷೇಧ ಇರಲಿದೆ.

Leave A Reply