2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿತ್ತು. ಕೊರೊನಾ ಕಾರಣದಿಂದ ಹಿಂದಿನ ಎರಡು ವರ್ಷ ಶೇ. 20 ರಷ್ಟು ಪಠ್ಯ ಕಡಿತ ಮಾಡಲಾಗಿತ್ತು. ಬೋಧಿಸಿದ ಶೇ. 80 ರಷ್ಟು ಪಠ್ಯಕ್ಕೆ ಪರೀಕ್ಷೆ ನಡೆಸಲಾಗಿತ್ತು. ಆದರೆ ಈ ಬಾರಿ ಯಾವುದೇ ಪಠ್ಯ ಕಡಿತಗೊಳಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.