Home Latest Sports News Karnataka ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರ ಗಂಡು ಮಗು ಸಾವು !

ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರ ಗಂಡು ಮಗು ಸಾವು !

Hindu neighbor gifts plot of land

Hindu neighbour gifts land to Muslim journalist

ಖ್ಯಾತ ಫುಟ್ಬಾಲ್ ಆಟಗಾರ ರೊನಾಲ್ಡೋ ತನ್ನ ನವಜಾತ ಅವಳಿ ಶಿಶುಗಳಲ್ಲಿ ಒಂದು ಮಗು ಪ್ರಾಣ ಕಳೆದುಕೊಂಡಿದೆ ಎಂದು ಬರೆದಿದ್ದಾರೆ.

ರೊನಾಲ್ಡೋ ಮತ್ತು ಅವರ ಹೆಂಡತಿ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಅವಳಿ ಮಕ್ಕಳನ್ನು ನಿರೀಕ್ಷೆಯಲ್ಲಿದ್ದರು.

ಆದರೆ ಗಂಡು ಮಗು ಸತ್ತಿದ್ದು ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ

“ನಮ್ಮ ಗಂಡು ಮಗು ತೀರಿಕೊಂಡಿದೆ ಎಂದು ನಾವು ದುಃಖದಿಂದ ಘೋಷಿಸಬೇಕಾಗಿದೆ” ಎಂದು ರೊನಾಲ್ಲೊ ತಮ್ಮ ಹೇಳಿಕೆಯನ್ನು ಪ್ರಾರಂಭಿಸಿದರು. ಇದು ಯಾವುದೇ ಪೋಷಕರು ಅನುಭವಿಸಬಹುದಾದ ದೊಡ್ಡ ನೋವು. ನಮ್ಮ ಮಗಳ ಜನನ ಮಾತ್ರ ಈ ಕ್ಷಣವನ್ನು ಸ್ವಲ್ಪ ಭರವಸೆ ಮತ್ತು ಸಂತೋಷ ಹಾಗೂ ಶಕ್ತಿಯನ್ನು ನೀಡುತ್ತದೆ.

‘ವೈದ್ಯರು ಮತ್ತು ದಾದಿಯರ ಆರೈಕೆ ಮತ್ತು ಬೆಂಬಲಕ್ಕಾಗಿ ನಾವು ಈ ಸಮಯದಲ್ಲಿ ಧನ್ಯವಾದ ಹೇಳಲು ಬಯಸುತ್ತೇವೆ. ಈ ನಷ್ಟ ತುಂಬಲಾರದ್ದು ಮತ್ತು ಈ ಕಷ್ಟದ ಸಮಯದಲ್ಲಿ ಗೌಪ್ಯತೆಯನ್ನು ವಿನಂತಿಸುತ್ತೇವೆ. ಮಗು ನೀನು ನಮ್ಮ ದೇವರು. ನಾವು ಯಾವಾಗಲೂ ನಿನ್ನನ್ನು ಪ್ರೀತಿಸುತ್ತೇವೆ’ ಎಂದು ರೊನಾಲ್ಡೊ ಬರೆದುಕೊಂಡಿದ್ದಾರೆ.