ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ದಾರುಣ ಸಾವು !!

Share the Article

ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬ್ರಹ್ಮಾವರದ ಚಾಂತಾರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಹೇರೂರು ಗ್ರಾಮದ ಕೊಳಂಬೆಯ ರಾಜೀವ ನಗರದ ರಾಜಶೇಖರ (45) ಎಂದು ಗುರುತಿಸಲಾಗಿದೆ.

ಮಾನಸಿಕ ಅಸ್ವಸ್ಥರಾಗಿರುವ ಇವರು, ರೈಲ್ವೇ ಟ್ರ್ಯಾಕ್ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply