‘ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ನಾಮಕರಣ – ಸಿಎಂ ಬೊಮ್ಮಾಯಿ ಘೋಷಣೆ

Share the Article

ಶಿವಮೊಗ್ಗನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಕುರಿತು ಹಲವು ಹೆಸರು ಕೇಳಿ ಬಂದಿತ್ತು. ಆದರೆ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಇಂದು ಮುಖ್ಯಮಂತ್ರಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ, ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡೋದಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ನೀಡಲಾಗಿದೆ. ಈ ಹೆಸರನ್ನು ಇಡುವಂತೆ ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸ್ಸು ಕೂಡ ಮಾಡಲಾಗಿದೆ. ಕೇಂದ್ರದಿಂದ ಅನುಮೋದನೆಗೊಂಡು ಬರಲಿದೆ’ ಎಂದು ಹೇಳಿದರು.

ಜಿಲ್ಲೆಯ ವಿಮಾನ ನಿಲ್ದಾಣವು ಯಡಿಯೂರಪ್ಪ ಅವರ ಶ್ರಮ ಮತ್ತು ಆಸಕ್ತಿಯ ಫಲವಾಗಿದೆ. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರ ಅವರ ಹೆಸರನ್ನು ನಿಲ್ದಾನಕ್ಕೆ ಇಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿರೋದಾಗಿ ತಿಳಿಸಿದರು.

Leave A Reply