‘ಮೂಕನ ಮನೆ’ ಜಲಪಾತದಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ, ಕಾಲು ಜಾರಿ ಇಬ್ಬರ ಮೃತ್ಯು!

Share the Article

ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ಮೂಕನ ಮನೆ ಜಲಪಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಕೊಡ್ಲಿಪೇಟೆ ಮೂಲದ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಿಶೋರ್(29) ಮತ್ತು ಕುಮಾರ್(38) ಎಂಬುವವರೇ ಮೃತಪಟ್ಟವರು.

ಕಿಶೋರ್ ಮತ್ತು ಕುಮಾರ್ ನೀರಿನಲ್ಲಿ ಈಜಾಡಿ ಅನಂತರ ಕಲ್ಲಿನ ಬಂಡೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಜಲಪಾತಕ್ಕೆ ಬಿದ್ದದ್ದಾರೆ.

ಅಗ್ನಿಶಾಮಕದಳ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸೋಮವಾರ ಸಂಜೆ ವೇಳೆ ಮೃತದೇಹಗಳನ್ನು ನೀರಿನಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಸ್ಥಳಿಯ ಯಸಳೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಕಾರ್ಫಡ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಯಸಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply