ಪ್ರಧಾನಿ ಮೋದಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ| ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದು ಎಂಬ ಆತಂಕದಲ್ಲಿದ್ದ ರೈತರಿಗೆ ರಿಲಾಕ್ಸ್!

Share the Article

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದ್ದು,ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿತ್ತು. ಈ ಹಿನ್ನಲೆಯಲ್ಲಿ ಉತ್ತಮ ಬೆಳೆ ಬೆಳೆದು ಒಳ್ಳೆಯ ಆದಾಯ ಗಳಿಸಬಹುದೆಂಬ ಲೆಕ್ಕಾಚಾರದಲ್ಲಿದ್ದ ರೈತ ಸಮುದಾಯ ರಸಗೊಬ್ಬರಗಳ ಬೆಲೆ ಕಾರಣಕ್ಕೆ ಆತಂಕಕ್ಕೊಳಗಾಗಿತ್ತು.

ಆದರೆ ಇದೀಗ ಕೇಂದ್ರ ಸರ್ಕಾರ ರಸಗೊಬ್ಬರಗಳ ಮೇಲಿನ ಸಬ್ಸಿಡಿ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಮೂಲಕ ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದೆಂಬ ಆತಂಕಗೊಳಗಾಗಿದ್ದ ರೈತ ಸಮುದಾಯಕ್ಕೆ ಈ ಸುದ್ದಿ ನೆಮ್ಮದಿ ತಂದಿದೆ.

Leave A Reply