ಕಿಚ್ಚನ ಪರ ನಿಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ ಮಾತುಗಳಿವು

Share the Article

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು.

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ.

ಕನ್ನಡ ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಹಿಂದಿ ರಾಷ್ಟ್ರೀಯ ಭಾಷೆ ಎಂಬ ನಟ ಅಜೇಯ್ ದೇವಗನ್ ಹೇಳಿಕೆ ವಿಚಾರವಾಗಿ ಸುದೀಪ್ ಸರಿಯಾಗಿಯೇ ಹೇಳಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿಯವರು ‌ ಎಂದರು.

Leave A Reply