ONGC ಯಲ್ಲಿ ಭರ್ಜರಿ ಉದ್ಯೋಗವಕಾಶ | 3614 ಹುದ್ದೆಗಳು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ  ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 15,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹುದ್ದೆ : ಅಪ್ರೆಂಟಿಸ್ ಟ್ರೈನಿ

ಹುದ್ದೆ ಸಂಖ್ಯೆ : 3614

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಎಪ್ರಿಲ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 15, 2022

ವಿದ್ಯಾರ್ಹತೆ ಮತ್ತು ಅನುಭವ : ಬಿ.ಕಾಂ, ಬಿ.ಎ, ಬಿಬಿಎ, ಬಿ.ಎಸ್ಸಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :  ಮೇ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:  ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 9,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ : ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ :ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

https://www.apprenticeshipindia.gov.in/ ವೆಬ್‌ಸೈಟ್ ನಲ್ಲಿ ಮೊದಲು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಏಪ್ರಿಲ್ 27,2022 ರಿಂದ ಮೇ 15,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.