Home latest ಪಿಎಸ್‌ಐ ನೇಮಕಾತಿ ರದ್ದುಗೊಳಿಸಿ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರಕಾರ!

ಪಿಎಸ್‌ಐ ನೇಮಕಾತಿ ರದ್ದುಗೊಳಿಸಿ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರಕಾರ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಪಿಎಸ್‌ಐ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟಿಸಲಾಗಿದ್ದು, ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿದೆ.

ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಯಾರೇ ಇರಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ತೀವಿ. ಅವರನ್ನು ಹೆಡೆಮುರಿ ಕಟ್ತೀವಿ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಒಟ್ಟು 54289 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಇದ್ದ ಆಪಾದಿತರನ್ನು ಬಿಟ್ಟು , ಉಳಿದವರಿಗೆ ಮರುಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.