ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿದೆ ಪುತ್ತೂರಿನ ಈ ವಿದ್ಯಾಸಂಸ್ಥೆ!
ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ನೈಜತೆಯನ್ನು ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್ ಚಿತ್ರ ತೋರಿಸಿಕೊಟ್ಟಿದ್ದು ಇದೀಗ ಈ ಚಿತ್ರ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು.
ಹೌದು ಕಾಶ್ಮೀರದಲ್ಲಿ ಬದುಕಲಾರದೇ ಆಸ್ತಿ-ಪಾಸ್ತಿಯನ್ನು ತೊರೆದು ಪ್ರಾಣ ರಕ್ಷಣೆಗಾಗಿ ಅಲ್ಲಿಂದ ವಲಸೆಯಾಗಿ ಬಂದ ಸಾವಿರಾರು ಕಾಶ್ಮೀರಿ ಪಂಡಿತರು ದೇಶದ ವಿವಿಧ ಗ್ರೂಪ್ ಭಾಗಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂತಹ ಕಾಶ್ಮೀರಿ ಪಂಡಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ
ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆ ಉಚಿತ ಶಿಕ್ಷಣ ನೀಡುವುದಾಗಿ ಹೇಳಿದೆ.
ಶನಿವಾರ ಮಾಧ್ಯಮವೊಂದಕ್ಕೆ ನೀಡಿದ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನತ್ತೋಜ್ ಹೇಳಿದ್ದಾರೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ 6ನೇ ತರಗತಿಯಿಂದ ಪದವಿವರೆಗೂ ಉಚಿತ ಶಿಕ್ಷಣ ನೀಡಲಾಗುವುದು. ಅಲ್ಲದೇ ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಈಗಾಗಲೇ ನಾಲ್ವರು ಕಾಶ್ಮೀರಿ ಪಂಡಿತರ ಮಕ್ಕಳನ್ನು ದಾಖಲು ಮಾಡಿಕೊಂಡಿದ್ದೇವೆ ಎಂದು
ತಿಳಿಸಿದ್ದಾರೆ.