Home Education ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಇನ್ಮುಂದೆ ವಿದ್ಯಾರ್ಥಿಗಳ ಆಂತರಿಕ ಅಂಕ 40 ಕ್ಕೆ...

ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಇನ್ಮುಂದೆ ವಿದ್ಯಾರ್ಥಿಗಳ ಆಂತರಿಕ ಅಂಕ 40 ಕ್ಕೆ ಏರಿಕೆ!

Hindu neighbor gifts plot of land

Hindu neighbour gifts land to Muslim journalist

2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ.

2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ. ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ ಶಿಕ್ಷಣ ನೀತಿ (NEP) ಭಾಗವಾಗಿ ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದುವರೆಗೆ 30 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಮತ್ತು 70 ಅಂಕಗಳಿಗೆ ಥಿಯರಿ ಪರೀಕ್ಷೆ ನಡೆಸಲಾಗುತ್ತಿತ್ತು.

ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಮಾಡಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಏಕರೂಪದ ಆಂತರಿಕ ಮೌಲ್ಯಮಾಪನ ಪದ್ಧತಿ ಅಳವಡಿಸುತ್ತಿದೆ. ಮುಂಬರುವ ಮೊದಲು ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗಲಿದೆ.